ಕಾಂಗ್ರೆಸ್‌‍ ಕಾರ್ಯಕ್ರಮದಿಂದ ನೀಟ್‌ ವಿದ್ಯಾರ್ಥಿಗಳಿಗೆ ತೊಂದರೆ : ಆರ್‌.ಅಶೋಕ್‌ ಆರೋಪ

ಬೆಂಗಳೂರು,ಜೂ.22- ವೈದ್ಯಕೀಯ ಪ್ರವೇಶಾತಿ ಕೋರ್ಸ್‌ಗಳಿಗೆ ನಡೆದ ನೀಟ್‌-ಯುಜಿ 2026 ಪರೀಕ್ಷೆಗೆ ಕೆಲವು ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕೇಂದ್ರಗಳಿಗೆ ಬಾರದಿರಲು ಕಾರಣವಾಗಿದ್ದೇ ಕಾಂಗ್ರೆಸ್‌‍ ಸಮಾವೇಶ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅವರು, ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಹೆಚ್ಚಿನ ವಾಹನಗಳು ವಿವಿಧ ಭಾಗಗಳಿಂದ ಆಗಮಿಸಿ ನಗರದಲ್ಲಿ ಸಂಚಾರಿ ದಟ್ಟಣೆ ಶುರುವಾಯಿತು. ಪರಿಣಾಮ ವಿದ್ಯಾರ್ಥಿಗಳು ರಸ್ತೆ ಮಧ್ಯೆ ಭಾಗದಲ್ಲಿ ಸಿಲುಕಿ ಹಾಕಿಕೊಂಡಿದ್ದರಿಂದ ಸಕಾಲಕ್ಕೆ ಸರಿಯಾಗಿ ಬರಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾಂಗ್ರೆಸ್‌‍ ನೇರ ಹೊಣೆ ಎಂದು ದೂರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಅವರು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಕಾದರು. ಇದು ವಿದ್ಯಾರ್ಥಿಗಳ ಬಗ್ಗೆ ಅವರಿಗಿರುವ ಬದ್ಧತೆಯನ್ನು ತೋರುತ್ತದೆ. ಆದರೆ ಕಾಂಗ್ರೆಸ್‌‍ ನಾಯಕರ ನಗರದಲ್ಲಿ ಸಂಚಾರ ದಟ್ಟಣೆ ಸೃಷ್ಟಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಂತೆ ತೊಂದರೆ ಮಾಡಿದರು. ಇದು ಯಾವ ಪುರುಷಾರ್ಥಕ್ಕೆ ಮಾಡಬೇಕಿತ್ತು ಎಂದು ಪ್ರಶ್ನೆ ಮಾಡಿದರು.

ನಗರದ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಸಿದ್ದಾರೆ. ಇದಕ್ಕೆ ನಮ ಅಭ್ಯಂತರವಿಲ್ಲ. ಆದರೆ ನೀಟ್‌ ಬರೆಯುವ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆ ಪಕ್ಷದ ಸ್ವಯಂ ಸೇವಕರೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿತ್ತು. ದೇಶದ ಪ್ರಧಾನಿಯೇ ವಿಮಾನ ನಿಲ್ದಾಣದಲ್ಲಿ 45 ನಿಮಿಷ ಇರುವಾಗ ಕಾಂಗ್ರೆಸ್‌‍ನವರಿಗೆ ಎರಡುಮೂರು ಗಂಟೆ ತಡ ಮಾಡಿದ್ದರೆ ಗಂಡು ಹೋಗುತ್ತಿತ್ತೆ ಎಂದು ತರಾಟೆಗೆ ತೆಗೆದುಕೊಂಡಿದೆ.

ಅಷ್ಟಕ್ಕೂ ಸ್ವಲ್ಪ ಸಮಯ ವಿಳಂಬ ಮಾಡಿದ್ದರೆ ಹರಿಪ್ರಸಾದ್‌ ಅಧ್ಯಕ್ಷ ಸ್ಥಾನವನ್ನು ಯಾರೂ ಕಿತ್ತುಕೊಳ್ಳುತ್ತಿರಲಿಲ್ಲ. ಅವರೇ ಅಧ್ಯಕ್ಷರಾಗಿ ಮುಂದುವರೆಯುತ್ತಿದ್ದರು. ವೇದಿಕೆ ಮೇಲೆ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೂ ಆ ಪಕ್ಷದ ಕಾರ್ಯಕರ್ತರು ಮಾತನಾಡಲು ಬಿಡದೆ ಡಿಕೆ ಡಿಕೆ ಎಂದು ಕೂಗಿ ಇಡೀ ಕಾರ್ಯಕ್ರಮವನ್ನು ಹಾಳು ಮಾಡಿದರು. ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಗೂರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.