ಟಿಆರ್ ಪಿ ಹಗರಣ: ಇಂಡಿಯಾ ಟುಡೇ ಗ್ರೂಪ್‌ನ ಹಣಕಾಸು ಅಧಿಕಾರಿಗೆ ಇಡಿಯಿಂದ ಸಮನ್ಸ್ ಜಾರಿ

ಮುಂಬೈ: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ಹಗರಣಕ್ಕೆ ಸಂಬಂಧಿಸಿದಂತೆ ಇಂಡಿಯಾ ಟುಡೇ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್‌ ಜಾರಿ ಮಾಡಿದೆ.

ಈ ವಿಚಾರವಾಗಿ ಪಿಟಿಐಗೆ ಮಾಹಿತಿ ನೀಡಿರುವ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಯೊಬ್ಬರು, ‘ಅಕ್ರಮ ಹಣ ವರ್ಗಾವಣೆಯ ಆರೋಪದ ಅಡಿಯಲ್ಲಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಸಂಸ್ಥೆಯು ಇಸಿಐಆರ್ (ಜಾರಿ ಪ್ರಕರಣ ಮಾಹಿತಿ ವರದಿ) ಅನ್ನು ದಾಖಲಿಸಿಕೊಂಡಿದೆ. ಇಸಿಐಆರ್ ಎಂಬುದು ಪೊಲೀಸ್ ಎಫ್‌ಐಆರ್‌ಗೆ ಸಮನಾಗಿರುತ್ತದೆ ಎಂದು ತಿಳಿಸಿದ್ದಾರೆ. ಹೇಳಿಕೆ ಪಡೆಯುವ ಸಲುವಾಗಿ ಇಡಿ ಸಮನ್ಸ್ ಜಾರಿ ಮಾಡಿದೆ.