Tulu Language: ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ; ವಿ ಸುನೀಲ್ ಕುಮಾರ್

    ‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು’ ಎಂದು ವಿ ಸುನೀಲ್ ಕುಮಾರ್ ಹೇಳಿದ್ದಾರೆ.

    ಬೆಂಗಳೂರು: ಇದೇ ಬರುವ ಸೆಪ್ಟೆಂಬರ್ 18ರಂದು ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಗೆ (Cabinet Meeting in Mangaluru) ದಿನ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಅಭಿವೃದ್ಧಿಯ ಬಗ್ಗೆ ಬೇಡಿಕೆಗಳು ಗರಿಗೆದರಿವೆ.

    ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಬಗ್ಗೆ ಉಲ್ಲೇಖಿಸಿ ಪೋಸ್ಟ್ ಮಾಡಿರುವ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್, (V Sunil Kumar) ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

    ಈ ಸಂಬಂಧ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ ವಿ ಸುನೀಲ್ ಕುಮಾರ್, ‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು ಎಂದು ನಾನು ಆಗ್ರಹಿಸುತ್ತೇನೆ’ ಎಂದು ಹೇಳಿದ್ದಾರೆ.