ತುಮಕೂರು: ರಾಷ್ಟ್ರೀಯ ಹೆದ್ದಾರಿ ಊರುಕೆರೆ ಬಳಿ ವಿಜಯಪುರದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ರಾಯಲ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಖಾಸಗಿ ಬಸ್‌ಗೆ ಶನಿವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಮಂದಿಗೆ ತೀವ್ರ ಗಾಯಗೊಂಡಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವಿಜಯಪುರದ ನೀಲಮ್ಮ ಎಂಬುವರು ತಮ್ಮ ಸೀಟಿನ ಕೆಳಗಡೆ ಬೆಂಕಿ ಹೊತ್ತಿಕೊಂಡಿದ್ದನ್ನು ಕಂಡು ಕಿರುಚಾಡಿದ್ದಾರೆ. ಅವರ ಕಿರುಚಾಟಕ್ಕೆ ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಎಚ್ಚೆತ್ತು ಬಸ್‌ನಿಂದ ಇಳಿದು, ಜಿಗಿದು ದುರಂತದಿಂದ ಪಾರಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಪ್ರಸಾದ್, ಕೆಂಭಾವಿಯ ಅಯೂಬಿ, ತಾಳಿಕೋಟೆಯ ತೌಸಿಫ್, ಮೆಹಬೂಬ್, ಶಬ್ಬೀರ್ ಮತ್ತು ದಿಲೀಪ್ ಎಂಬುವರು ಗಾಯಗೊಂಡಿದ್ದಾರೆ. ನೀಲಮ್ಮ ಎಂಬಾಕೆಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ ಎಂದು ಡಿವೈಎಸ್ಪಿ ತಿಪ್ಪೇಸ್ವಾಮಿ ತಿಳಿಸಿದರು.