ಎರಡು ದಿನ ಬ್ಯಾಂಕ್ ನೌಕರರ ಮುಷ್ಕರ: ಬ್ಯಾಂಕಿಂಗ್ ಸೇವೆಯಲ್ಲಿ ಆಗಲಿದೆ ವ್ಯತ್ಯಯ

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಗುರುವಾರ ಮತ್ತು ಶುಕ್ರವಾರ (ಡಿಸೆಂಬರ್ 16 ಮತ್ತು 17) ದೇಶದಾದ್ಯಂತ ಮುಷ್ಕರಕ್ಕೆ ಕರೆಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎರಡು ದಿನ ರಾಷ್ಟ್ರೀಕೃತ ಬ್ಯಾಂಕ್‌ಗಳ ಶಾಖೆಗಳಲ್ಲಿ ಹಣ ವರ್ಗಾವಣೆ, ಸ್ವೀಕೃತಿ, ಸಾಲ ಮಂಜೂರಾತಿ, ಚೆಕ್‌ ಕ್ಲಿಯರೆನ್ಸ್‌ನಂತಹ ಸೇವೆಗಳಿಗೆ ಅಡ್ಡಿಯಾಗಲಿದೆ.