ಕರಾವಳಿಯಾದ್ಯಂತ ಎರಡು ದಿನ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

ಉಡುಪಿ: ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ. 12 ಹಾಗೂ 13ರಂದು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.