ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿನಿಂದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ತಾಲ್ಲೂಕಿನ ಬಂಟ್ವಾಳದ 57 ವರ್ಷದ ಮಹಿಳೆ ಹಾಗೂ ಸುರತ್ಕಲ್ ನ ಇಡ್ಯಾದ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಸೋಂಕಿತ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯುವಕ ಸರ್ಕಾರಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಇಬ್ಬರು ಮೃತಪಟ್ಟಿದ್ದಾರೆ.
ಈ ಮೂಲಕ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದೆಯಾಗಿದೆ