ಉಡುಪಿ: ಬ್ರಹ್ಮಾವರ ತಾಲೂಕು ಹನೇಹಳ್ಳಿ ಗ್ರಾಮದ ಮಾಸ್ತಿನಗರ ನಿವಾಸಿ ಶಂಕರ ಸುವರ್ಣ (65) ಎಂಬ ವ್ಯಕ್ತಿಯು 2020 ರ ನವೆಂಬರ್ 10 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820- 2526444, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಬ್ರಿ ಗ್ರಾಮದ ಚಂದುಕುಂದು ಪಾಡಿಗಾರಬೆಟ್ಟು ನಿವಾಸಿ ಸುಧೀರ (45) ಎಂಬ ವ್ಯಕ್ತಿಯು ಆಗಸ್ಟ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ. ಸಂಖ್ಯೆ: 08253-251116, ಪಿ.ಎಸ್.ಐ ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.