ಮಂದಾರ್ತಿ: ಮಂದಾರ್ತಿ ಸಮೀಪ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ಕಂಡ ಸ್ಥಳೀಯರು ವಿದ್ಯುತ್ ಅವಘಡ ಆಗಿರಬಹುದೆಂಬ ಶಂಕೆಯಿಂದ ಘಟನಾ ಸ್ಥಳಕ್ಕೆ ಬಂದಾಗ, ಹೊತ್ತಿ ಉರಿಯುತ್ತಿರುವ ಕಾರು ಪತ್ತೆಯಾಗಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಬೆಂಕಿ ಆಕಸ್ಮಿಕಕ್ಕೆ ಬಲಿಯಾದರೆ ಅಥವಾ ಇದೊಂದು ಉದ್ದೇಶಪೂರ್ವಕ ಕೃತ್ಯವೋ ಎನ್ನುವುದು ತನಿಖೆಯಿಂದ ಬಯಲಾಗಬೇಕಿದೆ.