ವಡೋದರಾ: ಗುಜರಾತ್ ನ ವಡೋದರಾದಲ್ಲಿ ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ವಡೋದರಾದ ವಾಘೋಡಿಯಾ ಕ್ರಾಸ್ ರಸ್ತೆ ಬಳಿಯ ಇರುವ ಸೇತುವೆ ಬಳಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೃತಪಟ್ಟರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದೆ ಎಂದು ತಿಳಿದುಬಂದಿದೆ.