ಗೋಕರ್ಣ: ಮಾದಕ ದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಸಾಫ್ಟ್ವೇರ್ ಡೆವಲಪರ್ಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರನ್ನು ಬಿಹಾರದ ಮುಂಗೇರ್ನ ಜಮಾಲ್ಪುರದ ಪಲ್ಲವಿ ಪ್ರಿಯಾ 29 ಮತ್ತು ಜಾರ್ಖಂಡ್ನ ಬೆರಾಮೊ, ಬೊಕಾರೊ ಮೂಲದ ಪ್ರಿಯಾ ರಾಯ್ (26) ಎಂದು ಗುರುತಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ.
ಬಾಡಿಗೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದುದನ್ನು ಕಂಡ ಪೊಲೀಸರು ತಡೆದಿದ್ದಾರೆ. ಮಹಿಳೆಯರು ಕಾನ್ಸ್ಟೆಬಲ್ಗೆ ಅಸಭ್ಯ ಭಾಷೆಯಲ್ಲಿ ನಿಂದಿಸಿ ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರು ಕಾನ್ಸ್ಟೆಬಲ್ನನ್ನು ರಕ್ಷಿಸಿ ಮಹಿಳೆಯರನ್ನು ಠಾಣೆಗೆ ಕರೆದೊಯ್ದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿರುವುದಾಗಿ ವರದಿಯಾಗಿದೆ.