ಮೈಸೂರು: ಫೇಸ್ ಕ್ರೀಂ ತಿಂದು ಎರಡು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಮೈಸೂರು ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಎಂಬಲ್ಲಿ ನಡೆದಿದೆ.
ಬೆಳಗನಹಳ್ಳಿ ಗ್ರಾಮದ ಮಹೇಶ್-ಕನ್ಯಾ ದಂಪತಿಯ ಪುತ್ರ ಮನ್ವಿಷ್ (2) ಮೃತಪಟ್ಟ ಮಗು. ಮನ್ವಿಷ್ ಬುಧವಾರ ಮನೆಯಲ್ಲಿ ಆಟವಾಡುತ್ತಿದ್ದಾಗ ಮುಖಕ್ಕೆ ಹಚ್ಚುವ ಕ್ರೀಂ ತಿಂದಿದ್ದು, ಇದು ಪೋಷಕರ ಗಮನಕ್ಕೆ ಬಂದಿರಲಿಲ್ಲ.
ಬಳಿಕ ಅಂದು ರಾತ್ರಿ 10ಗಂಟೆ ಸುಮಾರಿಗೆ ವಾಂತಿ ಮಾಡಿಕೊಂಡಿದ್ದಳು. ಆಗ ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಿದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.