ಮಂಗಳೂರು: ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರ ಕುರಿತ ಮಾಹಿತಿ ನನಗೆ ಗೊತ್ತಿಲ್ಲ. ಮಾಧ್ಯಮ ಮೂಲಕ ಗೊತ್ತಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಲ್ಲಿ ಮಾಧ್ಯಮದ ಜತೆಗೆ ಮಾತನಾಡಿ ಅನಂದ್ ಸಿಂಗ್ ಪಕ್ಷದ ಬದ್ದತೆಯ ಶಾಸಕರು ಎಂದ ಅವರು, ಮೈತ್ರಿ ಸರಕಾರ ಸುಭದ್ರವಾಗಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಐದು ಶಾಸಕರ ರಾಜೀನಾಮೆಯಿಂದ ಸರ್ಕಾರ ಕೆಡವಲು ಸಾಧ್ಯನಾ.? ಎಂದು ಪ್ರಶ್ನಿಸಿದರು.
ಕಳೆದ ಒಂದೂವರೆ ವರ್ಷಗಳಿಂದ ಈ ತರಹದ ಬೆಳವಣಿಗೆ ನಡೀತಿದೆ ಎಂದು ಹೇಳಿದರು.