ತಿರಸ್ಕೃತ ಬೆಳೆ ವಿಮೆ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಪೂರಕ ದಾಖಲೆ ಸಲ್ಲಿಸಿ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಯಾದ ಪ್ರಸ್ತಾವನೆಗಳನ್ನು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆಬಾರದಿರುವ ಹಿನ್ನೆಲೆ ತಿರಸ್ಕರಿಸಿರುತ್ತಾರೆ.

ಈ ತಿರಸ್ಕೃತ ಪ್ರಕರಣಗಳ ಪಟ್ಟಿಯನ್ನು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದ್ದಲ್ಲಿ 15 ದಿನಗಳ ಒಳಗಾಗಿ ಪೂರಕ ದಾಖಲೆಗಳೊಂದಿಗೆ ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಅಥವಾ ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.