UCEED ಸಾಮಾನ್ಯ ಪ್ರವೇಶ ಪರೀಕ್ಷೆ: ಅಖಿಲ ಭಾರತ ಮಟ್ಟದಲ್ಲಿ ಉನ್ನತ ಸ್ಥಾನ ಪಡೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಅಮೂಲ್ಯ.

ಕುಂದಾಪುರ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ UCEED(ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು| ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ AIR-3827 Rank ಪಡೆಯುವುದರ ಮೂಲಕ ಅತ್ಯುನ್ನತ ಸಾಧನೆ ಮೆರೆದಿದ್ದಾಳೆ. ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ‌ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.