ಉಚಿತ ಕಂಪ್ಯೂಟರ್ ತರಬೇತಿ: ನೋಂದಣಿಗೆ ಸೂಚನೆ

ಉಡುಪಿ, ಮೇ 31: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ, ಇಲ್ಲಿ ಸಾಫ್ಟ್ ಸ್ಕೀಲ್ಸ್ ಮತ್ತು ಬೇಸಿಕ್ ಕಂಪ್ಯೂಟರ್, ಕನ್ನಡನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಇಚ್ಚಿಸುವ ಕೆಲಸ ಹುಡುಕುವ ಆಸಕ್ತ ಯುವಕ, ಯುವತಿಯರು, ವಿದ್ಯಾರ್ಥಿಗಳು ನೋಂದಾವಣಿ ಮಾಡಬಹುದಾಗಿದೆ.

ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ; 0820-2574869, 9480259790 ಅನ್ನು ಸಂಪರ್ಕಿಸುವಂತೆ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.