ಹೆಬ್ರಿ: ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆ ಸೀಮಿತವಾಗಿರಬಾರದು ಎಂಬ ಉದ್ದೇಶದಿಂದ ಶಾಲೆ ಕಾಲೇಜಿಗೆ ತೆರಳಿ ನಿರಂತರವಾಗಿ ಕನ್ನಡ ಕಂಪನ್ನು ವಷ೯ ಪೂತಿ೯ ಕನ್ನಡ ಗೀತೆಗಳ ಗಾಯನ, ಗಾನಯಾನ ಕಾಯ೯ಕ್ರಮ ಮೂಲಕ ರಾಜ್ಯಕ್ಕೆ ಮಾದರಿಯಾದ ಹೆಬ್ರಿಯ ಚಾಣಕ್ಯ ಸಂಸ್ಥೆಯ ಕನ್ನಡ ಅಭಿಮಾನ ಶ್ಲಾಘನೀಯ ಎಂದು ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಹೇಳಿದರು.
ಮುದ್ರಾಡಿ ನೆಲ್ಲಿಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿಣ್ಣರ ಕಲರವ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಷ೯ ಪೂತಿ೯ ಶಾಲಾ ಕಾಲೇಜುಗಳಲ್ಲಿ ಕನ್ನಡ ಗೀತೆಗಳ ಗಾಯನ ಗಾನಯಾನ ಕಾಯ೯ಕ್ರಮವನ್ನು ಆಯೋಜಿಸುತ್ತಿರುವ ಸಂಸ್ಥೆಯ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ ವಹಿಸಿದ್ದರು.
ಕೇವಲ ಅಂಕಗಳಿಕೆಯೇ ಶಿಕ್ಷಣವಲ್ಲ, ಸಂಸ್ಕಾರದ ಜತೆ ಬದುಕು, ಶಿಕ್ಷಣ ಕಲಿತಾಗ ಮಾತ್ರ ಪರಿಪೂಣ೯ ಶಿಕ್ಷಣವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ನೆಲ್ಲಿಕಟ್ಟೆ ಶಾಲೆಯಲ್ಲಿ ಶಿಕ್ಷಣದ ಜತೆ ಮಕ್ಕಳನ್ನು ಸಾಂಸ್ಕೃತಿಕವಾಗಿ ತೊಡಗಿಸಿಕೊಂಡು ಅವರ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಗಣಪತಿ ಎಂ. ಹೇಳಿದರು.
ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ರಘುರಾಮ ಶೆಟ್ಟಿ , ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಮ್ಯಕಾಂತಿ, ಎಸ್ ಡಿಎಂಸಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ , ಉಪಾಧ್ಯಕ್ಷ ಶಂಕರ್ ಶೆಟ್ಟಿಗಾರ, ಪತ್ರಕತೆ೯ ಸುಮಲತಾ ಹೆಬ್ಬಾರ್ , ವಿದ್ಯಾರ್ಥಿ ನಾಯಕ ಸಮಥ೯ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಅಮೃತ , ಶ್ರೇಯಾಶ್ರೀ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.
ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಸ್ವಾಗತಿಸಿ, ಶಿಕ್ಷಕಿ ಶೋಭಾ ಕಾಯ೯ಕ್ರಮ ನಿರೂಪಿಸಿ, ನಂದಿನಿ ವಂದಿಸಿದರು.
ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾಯ೯ಕ್ರಮ ನಡೆಯಿತು.