ಉದ್ಯಾವರ, ಕಡೆಕಾರು, ಅಲೆವೂರು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸನ್ಮಾನ

ಉದ್ಯಾವರ: ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ 46ನೇ ಕಾರ್ಯಕ್ರಮವಾದ ಕ್ರೀಡಾ ಕೂಟದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ, ಉಪಾಧ್ಯಕ್ಷೆ ಮಧುಲತಾ ಶಶಿಧರ್, ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ನವೀನ್ ಶೆಟ್ಟಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ, ಉಪಾಧ್ಯಕ್ಷ ಸುಧಾಕರ ಪೂಜಾರಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಸನ್ಮಾನಿತರ ಪರವಾಗಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಮಾತಾನಾಡಿ, ಐಸಿವೈಎಂ ಉದ್ಯಾವರ ಸಂಘಟನೆಯ ಕಾರ್ಯಕ್ರಮವನ್ನು ಮೆಚ್ಚಿ, ಈ ಸಂಘಟನೆಯು ಈ ಸಮಾಜಕ್ಕೆ ಹಲವಾರು ಕೊಡುಗೆ ನೀಡಿದೆ. ನಮ್ಮ ಮೂರು ಪಂಚಾಯತ್ ಗಳಲ್ಲಿ ಈ ಸಂಘಟನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕುಲಪತಿ, ಸ್ಥಳೀಯ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ಸ್ಟ್ಯಾನಿ ಬಿ. ಲೋಬೊ, ಸಹಾಯಕ ಧರ್ಮಗುರು ರೊಲ್ವಿನ್ ಅರಾನ್ನ, ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ, ಪ್ರೆಸಿಲ್ಲಾ ಪಿರೇರಾ, ಸುವರ್ಣ ಮಹೋತ್ಸವದ ಅಧ್ಯಕ್ಷ ಮೈಕಲ್ ಡಿಸೋಜ, ಕಾರ್ಯದರ್ಶಿ ಡೋರಾ ಅರೋಜಾ, ಐಸಿವೈಎಂ ಅಧ್ಯಕ್ಷ ರೋಯಲ್ ಕಾಸ್ತಲಿನೊ, ಕಾರ್ಯದರ್ಶಿ ಜೇನ್ ಬೆಲಿಟಾ, ಕ್ರೀಡಾ ಸಂಚಾಲಕ ಜೋನ್ ಪ್ರಶಾಂತ್, ಪ್ರಮುಖರಾದ  ರೋಯ್ಸ್, ಜೂಲಿಯಾ ಮತ್ತಿತರರು ಉಪಸ್ಥಿತರಿದ್ದರು.

ಐಸಿವೈಎಂ ಸದಸ್ಯೆ ಪ್ರತೀಕ್ಷಾ ಗೋಮ್ಸ್ ಸ್ವಾಗತಿಸಿ ನಿರೂಪಿಸಿದರು. ಮರ್ವಿನ್ ಅಲ್ಮೆಡಾ ವಂದಿಸಿದರು.