ಬಿವಿಟಿ ಆಡಳಿತ ಟ್ರಸ್ಟಿ ಕೆ.ಎಂ. ಉಡುಪ ಇನ್ನಿಲ್ಲ

ಮಣಿಪಾಲ: ಭಾರತೀಯ ವಿಕಾಸ ಟ್ರಸ್ಟ್ ಇದರ ಆಡಳಿತ ಟ್ರಸ್ಟಿ ಕೆ.ಎಂ. ಉಡುಪ( 82 ) ಅವರು ಶನಿವಾರ ನಿಧನ ‌ಹೊಂದಿದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಸೆಲ್ಕೋ ಫೌಂಡೇಶನ್ ಇದರ ನಿರ್ದೇಶಕರಾಗಿದ್ದ ಅವರು ವರ್ಷದ ಹಿಂದೆ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಡಿಜಿಎಮ್‌ ಆಗಿದ್ದರು.
ಮೃತರು ಪತ್ನಿ, ಮೂವರು ಗಂಡು ಹಾಗೂ ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.