23 ಸಾವಿರ ಮೀನುಗಾರರ 60 ಕೋಟಿ ರೂ. ಸಾಲಮನ್ನಾ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಯನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಇಂದು ಬಿಡುಗಡೆ ಮಾಡಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಸಾಲಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಈ ಕರೋನದ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ  ಸಚಿವರು ಧನ್ಯವಾದ ತಿಳಿಸಿದ್ದಾರೆ.