ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 30 ಮಂದಿ ಕೊರೊನಾ ಶಂಕಿತರನ್ನು ಗುರುತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
30 ಮಂದಿ ಶಂಕಿತರ ಪೈಕಿ 24 ಮಂದಿ ಸೋಂಕಿತರ ಸಂಪರ್ಕದಲ್ಲಿದ್ದವರಾಗಿದ್ದು, ಇಬ್ಬರಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಉಳಿದ ನಾಲ್ಕು ಮಂದಿಯಲ್ಲಿ ಉಸಿರಾಟದ ಸಮಸ್ಯೆ ಕಂಡುಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಇಂದು 11 ಮಂದಿಯ ವೈದ್ಯಕೀಯ ವರದಿ ಬಂದಿದ್ದು, ಎಲ್ಲರಲ್ಲೂ ನೆಗೆಟಿವ್ ಬಂದಿದೆ. 33 ಮಂದಿಯ ವರದಿ ಬರಲು ಬಾಕಿಯಿದೆ. ಈವರೆಗೆ ಜಿಲ್ಲೆಯಲ್ಲಿ ಮೂರು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.