ಉಡುಪಿ: 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.
ಉಡುಪಿ ಕಾಂಗ್ರೆಸ್ ಭವನದಿಂದ ಆರಂಭಗೊಂಡ ಪಾದಯಾತ್ರೆ ಬ್ರಹ್ಮಗಿರಿ-ಆಸ್ಪತ್ರೆ ರಸ್ತೆ, ಜೋಡುಕಟ್ಟೆ- ಕೋರ್ಟ್ ರಸ್ತೆ – ಕೆ.ಎಂ. ಮಾರ್ಗದ ಮೂಲಕ ಸರ್ವಿಸ್ ಬಸ್ ಸ್ಟ್ಯಾಂಡ್ ಕ್ಲಾಕ್ ಟವರ್, ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಖಾಂತರ ಸಮಾಪನಗೊಂಡಿತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ರಮೇಶ ಕಾಂಚನ್, ಯತೀಶ್ ಕರ್ಕೇರಾ, ಹರೀಶ್ ಕಿಣಿ, ವೆರೋನಿಕಾ ಕರ್ನೆಲಿಯೋ, ಕೃಷ್ಣಮೂರ್ತಿ ಆಚಾರ್ಯ ಮೊದಲಾದ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.