ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಟೀಮ್ ನೇಶನ್ ಫಸ್ಟ್ ಸಹಯೋಗದೊಂದಿಗೆ ಅಕ್ಟೋಬರ್ 2ರಂದು ಗಾಂಧಿ ಜಯಂತಿಯ ಅಂಗವಾಗಿ ಮಲ್ಪೆ ಪಡುಕರೆ ಶಾಂತಿನಗರದಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಆಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಸ್ವಚ್ಚತಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅಂದು ಬೆಳಿಗ್ಗೆ 8.30ಕ್ಕೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕ ಕೆ. ರಘುಪತಿ ಭಟ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಟೀಮ್ ನೇಶನ್ ಫಸ್ಟ್ ಅಧ್ಯಕ್ಷ ಸೂರಜ್ ಕಿದಿಯೂರು ಹಾಗೂ ಬ್ಯಾಂಕಿನ ನಿದೇರ್ಶಕರು ಭಾಗವಹಿಸುವರು.
ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಟೀಮ್ ನೇಶನ್ ಫಸ್ಟ್ ತಂಡದೊಂದಿಗೆ 200ಕ್ಕೂ ಅಧಿಕ ಮಂದಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















