ಉಡುಪಿ: ಪ್ರಸಿದ್ಧ ಚಿತ್ರಕಾರ, ನಾಟಕ ಕಲಾವಿದ ಉದ್ಯಾವರದ ಸಂಪಿಗೆ ನಗರ ನಿವಾಸಿ ಆಸ್ಟಿನ್ ಮಚಾದೋ (42) ಅವರು ನದಿಯಲ್ಲಿ ಮರುವಾಯಿ ಹೆಕ್ಕಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಗುರುವಾರ ಉದ್ಯಾವರ ಸಂಪಿಗೆನಗರದ ಬಬ್ಬರ್ಯಗುಡ್ಡದ ನದಿಯಲ್ಲಿ ಮರುವಾಯಿ ಹೆಕ್ಕಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಮುಳುಗಿ ಆಸ್ಟಿನ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.