ಉಡುಪಿ: ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ, ಫೆ.19: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ, ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶಂಕರಪುರದ ವಿಶ್ವಾಸದ ಮನೆ ಎಂಬ ಮಾನಸಿಕ ಅಸ್ವಸ್ಥರ ಪುನರ್ವಸತಿ ಆಶ್ರಮದಲ್ಲಿ ವಾಸವಿದ್ದ, ಪಂಕಜ್ (24) ಎಂಬ ಯುವಕನು ಫೆ.18 ರಿಂದ ನಾಪತ್ತೆಯಾಗಿರುತ್ತಾರೆ.

152 ಸೆಂ.ಮೀ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2520444 ಅನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.