ಉಡುಪಿ: ದೊಡ್ಡಣಗುಡ್ಡೆ ಮೂಡುಸಗ್ರಿ ಸಮೀಪದ ರೈಲ್ವೆಹಳಿಯಲ್ಲಿ ಛಿದ್ರಗೊಂಡಿರುವ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ರಾತ್ರಿ ವೇಳೆ ಸಂಚರಿಸುವ ಗೂಡ್ಸ್ ರೈಲಿಗೆ ತಲೆಯೊಡ್ಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿ ಇಡಲಾಗಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೆಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಮೃತದೇಹವನ್ನು ಶವಗಾರಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡು. ಜೀವನ್ ಇಂದ್ರಾಳಿ, ಸಿದ್ಧಾರ್ಥ ಬೈಲೂರು ಇಲಾಖೆಗೆ ಸಹಕರಿಸಿದರು.