ಉಡುಪಿ: ಇಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣದಲ್ಲಿ 50ಕ್ಕೂ ಅಧಿಕ ಹಣ್ಣಿನ ಮತ್ತು ಔಷಧೀಯ ಸಸ್ಯಗಳನ್ನು ಬುಧವಾರ ನೆಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಯಂಟ್ಸ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ , ಸುವೃಣ ಎಂಟರ್ ಪ್ರೈಸಸ್ ಮುಖ್ಯಸ್ಥರಾದ ಸುನೀತಾ ಮಧುಸೂಧನ್, ಸ್ವಚ್ಚ ಭಾರತ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು ಮತ್ತು ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.