ಉಡುಪಿ: ಕೊರಂಗ್ರಪಾಡಿ ಗ್ರಾಮದ ನಿವಾಸಿ ನಾಪತ್ತೆ

ಉಡುಪಿ: ಉಡುಪಿ ತಾಲೂಕಿನ ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43) ಎಂಬುವವರು ಅಕ್ಟೋಬರ್ 26 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.