ಉಡುಪಿ: ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಸಮೀಪ ಇಂದು ಸಂಜೆ ಸಂಭವಿಸಿದೆ.
ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸಹಿತ ರಸ್ತೆಗೆ ಅಪ್ಪಳಿಸಿದ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಅವರನ್ನು ಕೂಡಲೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.