ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ- ಸೊತ್ತು ಸಹಿತ ಆರೋಪಿ ಬಂಧನ

ಉಡುಪಿ: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿಯ ಟೂರಿಸ್ಟ್ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ.

ಉಮೇಶ ಪೂಜಾರಿ (49) ಹಂದಾಡಿ ಬಂಧಿತ ಆರೋಪಿ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ ಬ್ರಹ್ಮಾವರದ ಟಾನಿಕ್ ವೈನ್ ನಿಂದ ಮದ್ಯ ಖರೀದಿಸಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಈತನಿಂದ ಒಟ್ಟು 30 ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ ಗಳು ಇವುಗಳ ಒಟ್ಟು ಮೌಲ್ಯ ಸುಮಾರು ರೂ. 1,700 ಹಾಗೂ ಮದ್ಯ ಮಾರಾಟ ಮಾಡಲು ಉಪಯೋಗಿಸಿದ್ದ ಸ್ಕೂಟರ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.