ಉಡುಪಿ: ಒಂಭತ್ತನೇ, ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಇಟಿ, ನೀಟ್, ಜೆಇಇ ಮೇನ್ಸ್, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ
ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್ ಏಸ್ ಸಂಸ್ಥೆಯು ಬ್ಯಾಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಗರಿಷ್ಠ
ಫಲಿತಾಂಶಕ್ಕಾಗಿ ವಿನೂತನ ರೀತಿಯ ತರಬೇತಿಯನ್ನು ಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳಿಂದ ಹಮ್ಮಿಕೊಂಡಿದೆ.
ಅಕ್ಟೋಬರ್ 19ರಿಂದ ಆರಂಭವಾಗಲಿರುವ ಈ ತರಬೇತಿಯಲ್ಲಿ ಅಕೌಂಟನ್ಸಿ, ಸ್ಟಟಿಸ್ಟಿಕ್ಸ್, ಬೇಸಿಕ್ ಮ್ಯಾಥ್ಸ್ ಬಗ್ಗೆ ತರಗತಿಗಳನ್ನು ನಡೆಸಲಾಗುವುದು. ಪ್ರತಿಭಾನ್ವಿತ ಪ್ರಾಧ್ಯಾಪಕ ವೃಂದದಿಂದ ಉಪನ್ಯಾಸ ಹಾಗೂ ಪರೀಕ್ಷೆಯಲ್ಲಿ ನಿರೀಕ್ಷಿಸಲಾಗುವ ಪ್ರಮುಖ ಅಧ್ಯಯನ ಮತ್ತು ಪ್ರಶ್ನೋತ್ತರಗಳ ಬಗ್ಗೆ ಸೂಕ್ತ ತರಬೇತಿ ನಡೆಯಲಿದೆ. ಅದರ ಜತೆಗೆ ಮಾದರಿ ಪರೀಕ್ಷೆಗಳನ್ನು ಕೂಡ ಆಯೋಜಿಸಲಾಗುತ್ತದೆ.
ವಿದ್ಯಾರ್ಥಿಗಳ ಹೆಚ್ಚಿನ ಅಧ್ಯಯನಕ್ಕಾಗಿ ಪ್ರಸಿದ್ಧ ಪ್ರಕಾಶಕರುಗಳ ಕೃತಿಗಳು ಸಂಸ್ಥೆಯ ಗ್ರಂಥಾಲಯದಲ್ಲಿ ಉಚಿತವಾಗಿ ಲಭ್ಯವಿರುತ್ತದೆ. ಐಬಿಪಿಎಸ್, ಎಸ್ಬಿಐ, ಹಾಗೂ ಇತರೇ ಬ್ಯಾಂಕ್ಗಳು ಶೀಘ್ರದಲ್ಲೇ ಆಯೋಜಿಸಲಿರುವ ಬ್ಯಾಕಿಂಗ್ ಪ್ರವೇಶ ಪರೀಕ್ಷೆಗಳಿಗಾಗಿ ದೈನಂದಿನ
ತರಗತಿಗಳು ಅಕ್ಟೋಬರ್ 19 ರಿಂದ ಆರಂಭವಾಗಲಿದೆ.
ಕಳೆದ 6 ವರ್ಷಗಳಿಂದ ಬ್ಯಾಂಕಿಂಗ್ ಪರೀಕ್ಷೆಗಾಗಿ ತರಬೇತಿಯನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು ಈಗಾಗಲೇ 600ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಬ್ಯಾಂಕ್ ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ತರಬೇತಿಯ ಸಂದರ್ಭದಲ್ಲಿ ರೈಲ್ವೆಸ್, ಇನ್ಸೂರೆನ್ಸ್, ಐಟಿ ಹಾಗೂ ಇನ್ನೂ ವಿವಿಧ ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ
ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಾಗುವುದು.
ಬ್ಯಾಂಕಿಂಗ್ ಪರೀಕ್ಷೆಗಳು ಪ್ರಿಲಿಮ್ಸ್ ಹಾಗೂ ಮೇನ್ಸ್ ಮಾದರಿಯಲ್ಲಿ ಜರಗಲಿದ್ದು, ಮ್ಯಾಥ್ಸ್, ರೀಸನಿಂಗ್, ಇಂಗ್ಲಿಷ್, ಜಿ.ಕೆ, ಕರೆಂಟ್ ಅಫರ್ಸ್, ಕಂಪ್ಯೂಟರ್ ನಾಲೆಡ್ಜ್ ಹಾಗೂ ಬ್ಯಾಂಕಿಂಗ್ ಕ್ಷೇತ್ರಗಳಿಗೆ ಸಂಬಂಧಿಸಿದ ಆಡಳಿತ ಹಾಗೂ
ಆರ್ಥಿಕ ಕ್ಷೇತ್ರಗಳ ವಿಚಾರಗಳ ಬಗ್ಗೆ ಪ್ರಶ್ನೆಗಳನ್ನು ಹೊಂದಿರುತ್ತದೆ. ಅಲ್ಲದೆ ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಶ್ನೆಗಳನ್ನು ಅತ್ಯಂತ ನಿಖರತೆಯಿಂದ ಉತ್ತರಿಸುವ ಪ್ರತಿಭೆಯನ್ನು ಪರೀಕ್ಷಾರ್ಥಿಗಳು ಅರಿತಿರಬೇಕು. ಈ ನಿಟ್ಟಿನಲ್ಲಿ ವೇಗ ಮತ್ತು ನಿಖರತೆಯ ಪರಿಣತೆಗಾಗಿ ಅನುಭವಿ ಪ್ರತಿಭಾನ್ವಿತ ಪ್ರಾಧ್ಯಾಪಕರಿಂದ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯ ಅಂತ್ಯದಲ್ಲಿ ಮಾದರಿ ಆನ್ಲೈನ್ ಪರೀಕ್ಷೆಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ವಿವಿಧ ಪ್ರಕಾಶಕರುಗಳ ಕೃತಿಗಳನ್ನು
ಗ್ರಂಥಾಲಯದ ವ್ಯವಸ್ಥೆಗಳ ಮೂಲಕ ನೀಡಲಾಗುವುದು.
ಈ ತರಬೇತಿಯು ಉಡುಪಿ ತೆಂಕಪೇಟೆಯ ಶ್ರೀಲಕ್ಷ್ಮೀಶ ವೆಂಕಟರಮಣ ದೇವಾಲಯದ ಮುಂಭಾಗದಲ್ಲಿರುವ ಏಸ್ ಸೆಂಟರ್ನಲ್ಲಿ ಜರಗಲಿದೆ. ಆಸಕ್ತ ವಿದ್ಯಾರ್ಥಿಗಳು ಈ ಕಚೇರಿಯ ದೂರವಾಣಿ ಸಂಖ್ಯೆ 0820 4299111 ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕ ಪಿ. ಲಾತವ್ಯ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.