ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಬಗ್ಗೆ ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹರಡಬಾರದು. ಇಂತಹ ಸುದ್ದಿಗಳನ್ನು ಹರಡುವವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು. ಕೊರೊನ ಶಂಕಿತ ವ್ಯಕ್ತಿಯ ಗುರುತು, ವಿಳಾಸ ಅಥವಾ ಇನ್ನಿತರ ವೈಯಕ್ತಿಕ ಮಾಹಿತಿಯನ್ನು ಸಹ ಮಾದ್ಯಮದಲ್ಲಿ ಬಹಿರಂಗಪಡಿಸಬಾರದು ಎಂದು ಜಿಲ್ಲಾ ಆರೋಗ್ಯ
ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಎಚ್ಚರಿಸಿದ್ದಾರೆ.












