ಉಡುಪಿ ಶ್ರೀ ಅದಮಾರು ಮಠದ ವತಿಯಿಂದ ಪ್ರಧಾನ ಮಂತ್ರಿ ಕೊರೋನಾ ಪರಿಹಾರ ನಿಧಿಗೆ 55,55,555 ರೂ. ದೇಣಿಗೆ

ಉಡುಪಿ:  ಭಾರತದ   ಪ್ರಧಾನ ಮಂತ್ರಿಯವರ ಕೊರೋನ ಸಂತ್ರಸ್ತರ ನಿಧಿಗೆ  ಅದಮಾರು ಮಠ ಹಾಗೂ ಮಠದ ಶಿಕ್ಷಣ ಸಂಸ್ಥೆಗಳ ವತಿಯಿಂದ ರೂ. 55,55,555. ವನ್ನು ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಜಗದೀಶ್,ಉಡುಪಿ ಶಾಸಕರಾದ ರಘುಪತಿ ಭಟ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್  ಇವರ ಮೂಲಕ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು,  ಕಾಲ ಕಾಲಕ್ಕೆ ಮಳೆ ಬರಬೇಕು ಮಳೆಯಿಂದ ಬೆಳೆ ಬೆಳೆಯಬೇಕು. ಆದರೆ ಪ್ರಸ್ತುತ  ಒಬ್ಬ ಮಾಡಿದ ತಪ್ಪಿನಿಂದ ವಿಶ್ವದ ಪ್ರತಿಯೊಬ್ಬರೂ ತಲೆ ಕೊಡುವ ಪ್ರಸಂಗ ಬಂದು ಜಗತ್ತಿಗೆ ದೊಡ್ಡ ಅನಾಹುತ ಬಂದಿದೆ. ನಮ್ಮ ದೇಶದ ಪ್ರಧಾನಿಗಳು ಸಂಕಷ್ಟದಲ್ಲಿರುವವರ ಪರಿಹಾರಕ್ಕಾಗಿ ಮಾಡುತ್ತಿರುವ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕು ಈ ನಿಟ್ಟಿನಲ್ಲಿ ನಾವು ನಮ್ಮ   ಮಠದಿಂದ ದೇವರಲ್ಲಿ ಪ್ರಾರ್ಥಿಸಿ ಮೊತ್ತವನ್ನು  ಪ್ರಸಾದ ರೂಪವಾಗಿ ನೀಡಿದ್ದೇವೆ. ಆದಷ್ಟು ಬೇಗ ಎಲ್ಲರೂ ಆರೋಗ್ಯವಂತರಾಗಲೆಂದು  ದೇವರಲ್ಲಿ ಪ್ರಾರ್ಥಿಸುತ್ತೇವೆ  ಎಂದರು.


ಈ ಹಿಂದೆ ಅದಮಾರು  ಮಠದ ವತಿಯಿಂದ  2,00,000.00  ರೂಪಾಯಿಗಳನ್ನು ಪ್ರಧಾನ ಮಂತ್ರಿಯವರ ಕೊರೋನ  ಪರಿಹಾರ ನಿಧಿಗೆ ನೀಡಲಾಗಿತ್ತು.ಪರ್ಯಾಯ ಶ್ರೀ ಅದಮಾರು ಮಠ ಶ್ರೀಕೃಷ್ಣ ಮಠದ ವತಿಯಿಂದ ದಿನವಹಿ ಸಾಮಗ್ರಿಗಳ 1000 ಕಿಟ್ ಗಳನ್ನೂ ಹಾಗೂ ಅದಮಾರು ಮಠದ ಆಡಳಿತದಲ್ಲಿರುವ ಕುಂಜಾರುಗಿರಿ  ಶ್ರೀ ದುರ್ಗಾದೇವಾಸ್ಥಾನದಿಂದ 250 ಕಿಟ್ ಗಳನ್ನೂ ನೀಡಲಾಗಿತ್ತು.