ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ,
ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 7, 8 ಹಾಗೂ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳು, ಕ್ರೆöÊಸ್ ಉಡುಪಿ ಮೊ.ನಂ:9482625925 ಹಾಗೂ ಹಿರೇಬೆಟ್ಟು ಮೊ.ದೇ.ವ.ಶಾ. ಪ್ರಾಂಶುಪಾಲರು ಮೊ.ನಂ: 7975115073 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.












