ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಭಾ.ಕೃ.ಅ.ಪ –ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಜಿಲ್ಲಾ ಪಂಚಾಯತ್ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆ (ರಿ) ಉಡುಪಿ, ಕೆನರಾ ಬ್ಯಾಂಕ್ ವಾರಂಬಳ್ಳಿ, ಬ್ಯಾಂಕ್ ಆಫ್ ಬರೋಡಾ ಉಡುಪಿ (ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರ) ಹಾಗೂ ಲಕ್ಷ್ಮಿ ಫಾರ್ಮ್ಸ್ & ಫೀಡ್ಸ್ ಮಂದಾರ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ -2026 ಕಾರ್ಯಕ್ರಮವು ಅಕ್ಟೋಬರ್ 17 ಮತ್ತು 18 ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಅ. 17 ರಂದು ಬೆಳಗ್ಗೆ 10.30 ಕ್ಕೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಸಚಿವ ಪಿ.ಎಂ ನರೇಂದ್ರಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್
ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ.ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.















