ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಬ್ರಹ್ಮಾವರದ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದಲ್ಲಿ ಎರಡು
ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವ, 19 ವರ್ಷ ವಯಸ್ಸು ಮೀರದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ. ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಮಾಡಲಾಗುವುದು ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ / ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಅಥವಾ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಮೊ.ನಂ: 9108241342 ಅಥವಾ 9686405090 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












