ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಾರ್ಮಿಕ ಸಂಘ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಜ. 26ರಂದು ಸಂಜೆ 4ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಅಣ್ಣಪ್ಪ ಸ್ವಾಮಿ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನ ಮಂತ್ರಿ ಭಾರತೀಯ ಜನಔಷಧ ಕೇಂದ್ರದಲ್ಲಿ ಎಲ್ಲ ರೀತಿಯ ಔಷಧಿಗಳು ದೊರೆಯಬೇಕು. ಜನ ಔಷಧ ಕೇಂದ್ರದಲ್ಲಿರುವ ಕಾರ್ಮಿಕರಿಗೆ ಇಎಸ್ಐ, ಪಿಎ-, ಉದ್ಯೋಗ, ವೇತನ, ಆರೋಗ್ಯ, ವಾಸ್ತವ್ಯ ಭದ್ರತೆ
ಒದಗಿಸಬೇಕು ಎಂದು ಆಗ್ರಹಿಸಿದರು.
ಸಹಕಾರಿ ಬ್ಯಾಂಕ್ಗಳು ಸಾಲಕ್ಕೆ ಸಂಬಂಧಿಸಿ ಜಾಮೀನುದಾರರನ್ನು ಜವಾಬ್ದಾರಿಯನ್ನಾಗಿಸಿ ಕಿರುಕುಳ ನೀಡುವ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಸಹಕಾರಿ ಬ್ಯಾಂಕ್ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಇಎಸ್ಐ, ಪಿಎ-, ಉದ್ಯೋಗ, ವೇತನ, ಆರೋಗ್ಯ ಭದ್ರತೆಯನ್ನು ನೀಡಬೇಕು. ಈ ಬೇಡಿಕೆಗಳಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಮರೂರು, ಪ್ರಧಾನ ಕಾರ್ಯದರ್ಶಿ ಕೃಷ್ಣ ರಾವ್ ಆರೂರು, ದ.ಕ. ಜಿಲ್ಲಾಧ್ಯಕ್ಷ ಸಂತೋಷ್ ಕಾವೂರು, ಪ್ರಧಾನ ಕಾರ್ಯದರ್ಶಿ ಅಶೋಕ್ ಪೂಜಾರಿ ಉಪಸ್ಥಿತರಿದ್ದರು.