ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಮಚ್ಚೀಂದ್ರ ಹಾಕೆ ಅವರನ್ನು ಸರಕಾರ ನೇಮಕಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ.
2015 ರ ಬ್ಯಾಂಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಇವರು ರಾಜ್ಯದ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ನಿರ್ಗಮನ ಎಸ್ಪಿ ನಿಶಾ ಜೇಮ್ಸ್ ಅವರಿಗೆ ಯಾವುದೇ ಸ್ಥಳ ಸೂಚಿಸಿಲ್ಲ. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ 2018 ರ ಫೆಬ್ರವರಿ 23 ರಂದು ಅಧಿಕಾರ ಸ್ವೀಕರಿಸಿದ್ದರು. ಉತ್ತಮ ಆಡಳಿತ, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಿದ್ದರು. ಮಹಿಳೆಯರ ಸುರಕ್ಷತೆಗಾಗಿ ಜಿಲ್ಲೆಯಲ್ಲಿ ಒನಕೆ ಓಬವ್ವ ಪಡೆ ರಚಿಸಿದ್ದರು. ಈ ಮೂಲಕ ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
ಜಿಲ್ಲೆಯಲ್ಲಿ ರಾಮ ಮಂದಿರ ತೀರ್ಪು, ಸಿಎಎ ವಿರೋಧಿಸಿ ಪ್ರತಿಭಟನೆ, ಪೇಜಾವರ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಸಹಿತ ಹಲವು ಪ್ರಕರಣಗಳಲ್ಲಿ ಭದ್ರತೆಯನ್ನು ವ್ಯವಸ್ಥಿತವಾಗಿ ನೋಡಿಕೊಂಡಿದ್ದರು.