ಉಡುಪಿ:ಮಾರಿ ಜಾತ್ರೆ : ಮದ್ಯ ಮಾರಾಟ ನಿಷೇಧ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ, ಗಂಗೊಳ್ಳಿಯ ಮಾರಿ ಜಾತ್ರೆ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಗುಜ್ಜಾಡಿ ಹಾಗೂ ಗಂಗೊಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಫೆಬ್ರವರಿ 4 ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ರ ವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.