ಅಂಬಲಪಾಡಿ ಜಂಕ್ಷನ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ. ಗಟ್ಟಲೇ ಟ್ರಾಫಿಕ್ ಜಾಮ್

ಉಡುಪಿ: ಹೆದ್ದಾರಿ ಒವರ್ ಪಾಸ್ ಕಾಮಗಾರಿ ನಡೆಯುತ್ತಿರುವ ಅಂಬಲಪಾಡಿ ಜಂಕ್ಷನ್ ನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು.

ಒವರ್ ಪಾಸ್ ಕಾಮಗಾರಿ ಹಿನ್ನೆಲೆಯಲ್ಲಿ ಕಿರಿದಾದ ಸರ್ವಿಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ. ಈ ಮಧ್ಯೆ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಘನ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ವಾಹನಗಳು ತೆವಳುತ್ತ ಸಾಗುತ್ತಿದ್ದು, ಹೆದ್ದಾರಿಯುದ್ದಕ್ಕೂ ಸಂಚಾರ ದಟ್ಟನೆ ಉಂಟಾಗಿದೆ.