ಉಡುಪಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ/ಅರೆ ಅಲೆಮಾರಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಧಿಕೃತ ವೆಬ್‌ಸೈಟ್ www.ssp.postmatric.karnataka.gov.in/2122 ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ದಾಖಲೆಗಳ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in/ ಅಥವಾ ಇಲಾಖಾ ವೆಬ್ ಸೈಟ್ [email protected] ದೂರವಾಣಿ ಸಂಖ್ಯೆ 80507 70005, 0820-2573881 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿಗಾಗಿ [email protected] ದೂ.ಸಂ: 080-35254757 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.