HomeTrendingಉಡುಪಿ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20 ಹಾಗೂ 2020-21ನೇ ಸಾಲಿನಲ್ಲಿ ನಡೆದ ಸಿಬಿಎಸ್ಸಿ , ಐಸಿಎಸ್ಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಶೇ. 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ₹7,000 ಹಾಗೂ ಶೇ.75 ಕ್ಕಿಂತಲು ಹೆಚ್ಚು ಅಂಕಗಳನ್ನು ಪಡೆದ ವಿದ್ಯಾಥಿಗಳಿಗೆ ₹15,000 ಪ್ರೋತ್ಸಾಹಧನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಇಲಾಖಾ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ ಅಪ್ಡೇಟ್ ಮಾಡಿಸಲು ತಮ್ಮ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 2574 892 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

error: Content is protected !!