ಉಡುಪಿ:ಅಂಗನವಾಡಿ ಹುದ್ದೆ ಆಯ್ಕೆ ಪ್ರಕ್ರಿಯೆ: ಆಕ್ಷೇಪಣೆ ಆಹ್ವಾನ

ಉಡುಪಿ: ಕುಂದಾಪುರ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಮರ್ಪಕ ದಾಖಲೆಗಳೊಂದಿಗೆ ಫೆಬ್ರವರಿ 12 ಸಂಜೆ 5.30 ರ ಒಳಗಾಗಿ ಕಚೇರಿಗೆ ಸಲ್ಲಿಸಬಹುದು.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು https://udupi.nic.in ನಲ್ಲಿ ವೀಕ್ಷಿಸಬಹುದು ಎಂದು ಕುಂದಾಪುರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.