ಉಡುಪಿ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2022 ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.karnataka.gov.in/dbcdc ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.