ಉಡುಪಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ambigaradevelopment.karnataka.gov.inಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ : 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.