ಉಡುಪಿ: ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಹಿಂದಿ ಭಾಷಾ ಶಿಕ್ಷಕರು-2(ಹಿಂದಿ ಬಿ.ಎಡ್), ಸಮಾಜ ವಿಜ್ಞಾನ ಶಿಕ್ಷಕರು-1 (ಬಿ.ಎ/ಬಿ.ಎಡ್/ಎಮ್.ಎ), ವಿಜ್ಞಾನ ಶಿಕ್ಷಕರು -2 (ಬಿ.ಎಸ್ಸಿ/ಬಿ.ಎಡ್/ಎಮ್ಎಸ್ಸಿ) ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನಿಗದಿತ ದಾಖಲೆಗಳೊಂದಿಗೆ ಆಗಸ್ಟ್ 26ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಆಜಾದ್ ಭವನ, ಮಣಿಪಾಲ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 0820-2573596 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.