ಉಡುಪಿ: ಜಿಲ್ಲೆಯಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂರಚನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲು ಹಾಗೂ ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಸಲು ಮತ್ತು ಚಿತ್ರಕಲೆ / ಶಿಲ್ಪ ಕಲಾಕೃತಿಗಳ ಪ್ರರ‍್ಶನಕ್ಕೆ ಧನಸಹಾಯ ನೀಡಲು ಪ್ರಸಕ್ತ ಸಾಲಿನ ಸಾಮಾನ್ಯ, ವಿಶೇಷ ಘಟಕ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು ವೆಬ್‌ಸೈಟ್ Sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ. 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168, 7026506627 ಅಥವಾ 9591475884 ಅನ್ನು ಕಚೇರಿ ಅವಧಿಯಲ್ಲಿ ಅಥವಾ ವೆಬ್‌ಸೈಟ್ www.kannadasiri.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ.
ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.


















