ಉಡುಪಿ: 2025-26 ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ 8 ನೇ ತರಗತಿಯಲ್ಲಿ ಓದುತ್ತಿರುವ 3,50,000 ರೂ.ವರೆಗೆ ಕೌಟುಂಬಿಕ ಆದಾಯ ಹೊಂದಿರುವ ವಿದ್ಯಾರ್ಥಿಗಳು ಸೆ.30 ರೊಳಗೆ ಎನ್.ಎಂ.ಎಂ.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪರೀಕ್ಷೆಯು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲಾ ಮುಖ್ಯ ಶಿಕ್ಷಕಿಯನ್ನು ಭೇಟಿಯಾಗುವಂತೆ ಅಥವಾ ಡಯಟ್ ನ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಇವರನ್ನು ದೂ.ಸಂ.9449449602 ಮೂಲಕ ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.












