ಉಡುಪಿ: ನಗರಸಭಾ ನಿಧಿಯ ಶೇ.5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿ ರಾಜ್ಯ ರಾಷ್ಟ್ರೀಯ
ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ, ಶಿಕ್ಷಣ, ಸರ್ಕಾರಿ ಕಛೇರಿಗಳು, ಸಮುದಾಯ ಭವನ ಕಟ್ಟಡಗಳಿಗೆ ಜಾರುಹಾದಿ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಇಚ್ಛಿಸುವ ಆಸಕ್ತರು / ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಸಲ್ಲಿಸಲು ಮೇ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












