ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಪ್ರಯೋಗ ಶಾಲಾ ತಂತ್ರಜ್ಞರ (42) ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ (70) ಹುದ್ದೆಯಲ್ಲಿ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳನ್ನು ನೇಮಕಾತಿಗೆ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.
ಅಕ್ಟೋಬರ್ 1 ರಿಂದ 5 ರ ವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3.30ರ ವರೆಗೆ ಅಜ್ಜರಕಾಡಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.
ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲೆ, ದೃಢೀಕೃತ ದಾಖಲೆ ಮತ್ತು ಭಾವಚಿತ್ರದೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.